ಬೆಂಗಳೂರು
ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಸದಾ ಸಿದ್ಧ: ಡಿಸಿಎಂ ಡಿಕೆ ಶಿವಕುಮಾರ್.
ಕೈಗಾರಿಕೆಗಳ, ಉದ್ಯಮಗಳ ಬೆಳವಣಿಗೆಗೆ ಹಾಗೂ ಉದ್ಯೋಗ ಸೃಷ್ಟಿಗೆ ಪೂರಕವಾದ ಎಲ್ಲ ರೀತಿಯ ಸಹಕಾರ ಮತ್ತು ನೆರವನ್ನು ನೀಡಲು ನಮ್ಮ ಸರ್ಕಾರ ಸದಾ ಸಿದ್ಧವಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದರು.
ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ(ಕಾಸಿಯಾ) ವತಿಯಿಂದ ನೆಲಮಂಗಲ ತಾಲ್ಲೂಕಿನ ಡಾಬಸ್ ಪೇಟೆಯ ಅವ್ವೇರಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಿಸಿರುವ ಕಾಸಿಯಾ ಶ್ರೇಷ್ಠತಾ ಮತ್ತು ನಾವೀನ್ಯತಾ ಕೇಂದ್ರ ಮತ್ತು ವಸ್ತು ಪ್ರದರ್ಶನ ಕೇಂದ್ರದ ನೂತನ ಕಟ್ಟಡಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಣ್ಣ ಕೈಗಾರಿಕೆಗಳು ನಮ್ಮ ಆರ್ಥಿಕತೆಯ ಬೆನ್ನೆಲುಬು. ನನಗೆ ಅವುಗಳ ಶಕ್ತಿ ಮತ್ತು ಸವಾಲುಗಳ ಬಗ್ಗೆ ಸಂಪೂರ್ಣ ಅರಿವಿದೆ. ಯಾವುದೇ ಕ್ಷೇತ್ರದಲ್ಲಿ ಸ್ಪರ್ಧೆ ಇದ್ದಾಗ ಮಾತ್ರ ಗುಣಮಟ್ಟ ಹೆಚ್ಚಾಗುತ್ತದೆ. ಹಾಗಾಗಿ, ನಮ್ಮ ಕೈಗಾರಿಕೆಗಳಿಗೆ, ವಿಶೇಷವಾಗಿ ಸಣ್ಣ ಕೈಗಾರಿಕೆಗಳಿಗೆ, ಇನ್ನಷ್ಟು ಹೊಸ ಶಕ್ತಿ ತುಂಬಲು ನಾವು ಸಿದ್ಧರಿದ್ದೇವೆ. ನಮ್ಮ ನೀತಿಗಳನ್ನು ಮತ್ತಷ್ಟು ಆಕರ್ಷಕವಾಗಿಸುತ್ತೇವೆ. ಹೂಡಿಕೆಗೆ, ಬೆಳವಣಿಗೆಗೆ ಪೂರಕವಾದ ವಾತಾವರಣವನ್ನು ಸೃಷ್ಟಿಸುವ ಮೂಲಕ, ಉದ್ಯಮಗಳು ಇನ್ನಷ್ಟು ಪ್ರವರ್ಧಮಾನಕ್ಕೆ ಬರಲು ಬೇಕಾದ ಎಲ್ಲ ಬೆಂಬಲವನ್ನು ನೀಡುತ್ತೇವೆ.

ಬೆಂಗಳೂರಿನ ಹೆಮ್ಮೆ ನಮ್ಮಲ್ಲಿರುವ ಅಪ್ರತಿಮ ಪ್ರತಿಭೆಗಳು. ವಿಶ್ವದ ಉನ್ನತ ಹುದ್ದೆಗಳಲ್ಲಿರುವ ಅನೇಕರು ಬೆಂಗಳೂರಿನಲ್ಲೇ ವಿದ್ಯಾಭ್ಯಾಸ ಮಾಡಿದವರು, ಇಲ್ಲೇ ತಮ್ಮ ವೃತ್ತಿಜೀವನ ರೂಪಿಸಿಕೊಂಡವರು. ಇದು ನಮ್ಮ ಶಿಕ್ಷಣ ವ್ಯವಸ್ಥೆ ಮತ್ತು ಪ್ರತಿಭಾ ಪೋಷಣೆಯ ಸಾಮರ್ಥ್ಯಕ್ಕೆ ಸಾಕ್ಷಿ. ಜಾಗತಿಕ ಮಟ್ಟದಲ್ಲಿ ಆಗುತ್ತಿರುವ ತಂತ್ರಜ್ಞಾನದ ಪ್ರಗತಿಯನ್ನು ನಮ್ಮ ರಾಜ್ಯದಲ್ಲಿ ಅಳವಡಿಸಿಕೊಳ್ಳುತ್ತಿದ್ದೇವೆ. ಈ ತಂತ್ರಜ್ಞಾನ ಮತ್ತು ಪ್ರತಿಭೆಗಳ ಸಮ್ಮಿಲನದಿಂದ, ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗಗಳನ್ನು ಸೃಷ್ಟಿಸುವುದು ನಮ್ಮ ಪ್ರಮುಖ ಗುರಿಯಾಗಿದೆ.
ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಸಣ್ಣ ಕೈಗಾರಿಕೆಗಳ ಸಮಸ್ಯೆಗಳನ್ನು ಕಾಲಕಾಲಕ್ಕೆ ಸರ್ಕಾರದ ಗಮನಕ್ಕೆ ತರುವಲ್ಲಿ ಮತ್ತು ಪರಿಹಾರ ಕಂಡುಕೊಳ್ಳುವಲ್ಲಿ ನಿಮ್ಮ ಪಾತ್ರ ಶ್ಲಾಘನೀಯ.
*ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ 1 ಲಕ್ಷ ಕೋಟಿ ರೂಪಾಯಿಗಳ ಖರ್ಚು ಮಾಡಲು ಅಂದಾಜಿಸಲಾಗಿದೆ. 40 ಕಿಮೀ ಟನಲ್ ರಸ್ತೆ, 113 ಫ್ಲೈಓವರ್, ಮೆಟ್ರೋ ರೈಲು ನಿಲ್ದಾಣ ರೂಪಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಮಾತನಾಡಿ ಕೇಂದ್ರದಲ್ಲಿ ನಾನು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಮಂತ್ರಿ ಆಗಿದ್ದಾಗ ಅಂದು ಭಾರತದಾದ್ಯಂತ 20 ತಂತ್ರಜ್ಞಾನದ ತರಬೇತಿ ಕೇಂದ್ರಗಳನ್ನು ಸ್ಥಾಪನೆ ಮಾಡಲಾಯಿತು ಅವುಗಳಿಂದ ಹೆಚ್ಚಿನ ಕೈಗಾರಿಕೆಗಳ ಸ್ಥಾಪನೆಗೆ ಸಹಕಾರಿಯಾಯಿತು.
ದೇವನಹಳ್ಳಿಯ ಏರೋಸ್ಪೇಸ್ ಸೆಂಟರ್ ಅನ್ನು ಮಂಜೂರು ಮಾಡಿ ಅಲ್ಲಿ ಅನುಕೂಲವಾಗುವ ರೀತಿಯಲ್ಲಿ ಜಾರಿಗೊಳಿಸಿದೆ.
ಈ ತರಬೇತಿ ಕೇಂದ್ರದಲ್ಲಿ ಆಧುನಿಕ ತಂತ್ರಜ್ಞಾನ, ಎಕ್ಸ್ಪೋರ್‌ಟ್ ಗುಣಮಟ್ಟದ ಉತ್ಪಾದನೆಯು ವಿದೇಶಗಳಲ್ಲಿ ಹೆಚ್ಚು ಬೇಡಿಕೆಗೆ ಸಹಕಾರಿಯಾಗಬೇಕು ಎಂದರು
ಕಾಸಿಯಾ ನಿರ್ಮಿಸಿರುವ ತರಬೇತಿ ಕೇಂದ್ರಲ್ಲಿಯೂ ಕೂಡ ಗುಣಮಟ್ಟದ ತರಬೇತಿ ನೀಡುತ್ತಾರೆ, ಸ್ಥಳೀಯಯರಿಗೆ ಮೊದಲ ಆದ್ಯತೆ ಕೊಡಿ. ನಿಮ್ಮ ತಂತ್ರಜ್ಞಾನ ಕೈಗಾರಿಕಾ ಉತ್ಪನ್ನಗಳು ಹೊರ ದೇಶದಲ್ಲಿ ಬೇಡಿಕೆ ಸಿಗಬೇಕು. ಎಲ್ಲಾ ಕೈಗಾರಿಕೆಗಳಲ್ಲಿಯೂ ಕೂಡ ಅಭ್ಯರ್ಥಿಗಳಿಗೆ ಇದೇ ರೀತಿ ಕೌಶಲ್ಯಾಭಿವೃದ್ಧಿ ತರಬೇತಿಗಳು ಸಿಕ್ಕರೆ ಕೈಗಾರಿಕೆಗಳು ಬೆಳೆಯುತ್ತವೆ. ಹಾಗಾಗಿ ಎಲ್ಲಾ ಕೈಗಾರಿಕಾ ಪ್ರದೇಶಗಳಲ್ಲಿ ಒಂದು ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಆಗಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಎನ್. ಶ್ರೀನಿವಾಸ್, ಮಾಜಿ ಶಾಸಕ ಹಾಗೂ ಉದ್ಯಮಿ ಅಶೋಕ್ ಖೇಣಿ, ಕೆ.ಎಸ್.ಎಸ್.ಐ.ಡಿ.ಸಿ ಯ ವ್ಯವಸ್ಥಾಪಕ ನಿರ್ದೇಶಕರು ಕ್ಯಾಪ್ಟನ್ ಡಾ. ರಾಜೇಂದ್ರ, ಎಂ.ಎಸ್.ಎಂ.ಇ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ನಿರ್ದೇಶಕರು ನಿತೀಶ್ ಪಾಟೀಲ್,ಕಾಸಿಯಾ ಅಧ್ಯಕ್ಷರಾದ ಎಂ.ಜಿ ರಾಜಗೋಪಾಲ್, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು
ಬೆಂಗಳೂರು
ರೈತರು ಪ್ರತಿಭಟನೆಯನ್ನು ಕೈಬಿಡಲು ಮನವಿ ಮಾಡಿದ ಆಹಾರ ಸಚಿವ ಕೆ ಹೆಚ್. ಮುನಿಯಪ್ಪ.
ವಿಧಾನ ಸೌಧ: ಭೂಸ್ವಾಧಿನರಾದ ರೈತರಿಗೆ ಬದಲಿಯಾಗಿ ಅಭಿವೃದ್ಧಿ ಹೋಂದಿದ ಸ್ಥಳದಲ್ಲಿ 10781 ಚದರಡಿಯಷ್ಟು ಜಮೀನು ಹಾಗೂ ಪರಿಹಾರ ನೀಡಲು ನಿರ್ಧಾರ ಮಾಡಲಾಗಿದೆ.
ಬೆಂಗಳೂರು ಗ್ರಾಮಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನಲ್ಲಿ ರೈತರು ಕೈಗೊಂಡಿರುವ ಪ್ರತಿಭಟನೆಯನ್ನು ಕೈ ಬಿಡಲು ರೈತ ಸಂಘಟನೆಗಳಿಗೆ ಮನವಿ ಮಾಡಿದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆಹೆಚ್. ಮುನಿಯಪ್ಪ. ವಿಧಾನ ಸೌಧದಲ್ಲಿಂದು ಮಧ್ಯಮ ಹಾಗೂ ಬೃಹತ್ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೇಲ್ ರವರೊಂದಿಗೆ ಸಭೆಯನ್ನು ನೆಡೆಸಿ ಚರ್ಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೆಐಡಿಬಿ ವತಿಯಿಂದ ಜಮೀನನ್ನು ಭೂಸ್ವಾಧೀನ ಪಡಿಸಿಕೊಳ್ಳುತ್ತಿದ್ದು ನಾನು ರೈತರ ಪರವಾಗಿ ಒತ್ತಾಯ ಮಾಡಿದ್ದೇನೆ, ಮುಖ್ಯಮಂತ್ರಿ ಹಾಗೂ ಕೈಗಾರಿಕಾ ಸಚಿವರೊಂದಿಗೆ ಮಾತಾಡಿದ್ದು, ಇದನ್ನು ಮೊಟ್ಟ ಮೊದಲ ಹಂತದಲ್ಲಿ, ಈ ಹೋಬಳಿಯಲ್ಲಿ ಜಾಸ್ತಿ ಅಕ್ವೈರ್ ಆಗಿದೆ, ಅದನ್ನು ಕೈ ಬಿಡಬೇಕು ಎಂದು ಒತ್ತಾಯ ತಂದಿದ್ದೆ ಜೊತೆಗೆ ನೀರಾವರಿ ಭೂಮಿಯನ್ನು ಕೈ ಬಿಡಲು ಮನವಿ ಮಾಡಿದ್ದು ಸುಮಾರು 500 ಎಕರೆ ಯಸ್ಟು ಭೂಮಿಯನ್ನು ಕೈ ಬಿಟ್ಟಿದ್ದು ಇನ್ನು ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ರೈತರ ಭೂಮಿಯನ್ನು ಸ್ವಾಧೀನ ಮಾಡುವುದಿಲ್ಲಾ ಎಂಬ ನಿರ್ಧಾರವನ್ನು ಮಾಡಲಾಗಿದೆ ಎಂದರು.
ಅಂದು ಮುಖ್ಯಮಂತ್ರಿಗಳು ಅಲ್ಲಿನ ಪ್ರತಿಭಟನೆಯ ಸ್ಥಳಕ್ಕೆ ಭೇಟಿ ನೀಡಿ ಆಶ್ವಾಸನೆ ನೀಡಿದ ಹಿನ್ನಲೆಯಲ್ಲಿ ನಾವು ಮಾತು ಕೊಟ್ಟಿದ್ದಕ್ಕೆ ಚನ್ನರಾಯಪಟ್ಟಣ ಹೋಬಳಿಯಲ್ಲಿ ಮೂರು ಊರುಗಳ ಸುಮಾರು 500 ಎಕರೆ ಜಮೀನನ್ನು ಕೈಬಿಟ್ಟಿದ್ದು
ಇದು ನಮ್ಮ ಸರ್ಕಾರ ರೈತರ ಪರವಾಗಿ ತೆಗೆದುಕೊಂಡು ನಿರ್ದಾರ ಎಂದರು. ಒಂದು ವೇಳೆ ರೈತರ ಜಮೀನು ಸ್ವಾಧೀನವಾಗಿದ್ದಲ್ಲಿ ಅವರಿಗೆ ಅಭಿವೃದ್ಧಿ ಹೊಂದಿದ ಸ್ಥಳದಲ್ಲಿ ಅವರಿಗೆ 10781 ಚದರಡಿಯ ಜಮೀನನ್ನು ನೀಡಲು ನಿರ್ದಾರ ಮಾಡಲಾಗಿದೆ ಎಂದರು.
ಜಿಲ್ಲೆಯಲ್ಲಿ ಮಾನ್ಯ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಅವರಿಗೆ ನ್ಯಾಯ ಒದಗಿಸಲಾಗುವುದು ಎಂದರು. ಸಭೆಯಲ್ಲಿ ಜಿಲ್ಲಾಧಿಕಾರಿ ಬಸವರಾಜು, ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ.ಅನುರಾಧ, ಜಿಲ್ಲಾ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಸಿಇಒ ಮಹೇಶ್ ಕುಮಾರ್ ಉಪಸ್ಥಿತರಿದ್ದರು.
-
ಬೆಂಗಳೂರು ಗ್ರಾಮಾಂತರ10 months agoಕಾವೇರಿ ಹಾಗೂ ಎತ್ತಿನಹೊಳೆ ನೀರು ಕೊಡಿ ವೃಷಭಾವತಿ ನೀರು ಬೇಡ – ಶಾಸಕ ಧೀರಜ್ ಮುನಿರಾಜ್.
-
ಬೆಂಗಳೂರು ಗ್ರಾಮಾಂತರ10 months agoಕುಡಿಯುವ ನೀರಿಗೆ ಆದ್ಯತೆ, ಕಸಕ್ಕೂ ಮುಕ್ತಿ : ಡಿ.ಕೆ.ಶಿವಕುಮಾರ್
-
ತುಮಕೂರು10 months agoಎತ್ತಿನ ಹೊಳೆ ಯೋಜನೆಯ ಕಾಮಗಾರಿಗಳ ಪರಿಶೀಲನೆ
-
Uncategorized9 months agoಸರ್ಕಾರಿ ಆಸ್ಪತ್ರೆ ಬಳಿ ಸರ್ವೆ ಕಾರ್ಯ ನಿಲ್ಲಿಸಿ: ಕರವೇ ಎಚ್ಚರಿಕೆ.
-
ಬೆಂಗಳೂರು ಗ್ರಾಮಾಂತರ9 months agoಪ್ರತಿಭಾ ಪುರಸ್ಕಾರ ಸಮಾರಂಭ
-
ಬೆಂಗಳೂರು ಗ್ರಾಮಾಂತರ10 months agoಮಿಂಚಿನ ಕಾರ್ಯಾಚರಣೆ. ದರೋಡೆಕೋರರ ಬಂಧನ.
-
ಬೆಂಗಳೂರು ಗ್ರಾಮಾಂತರ9 months agoಉತ್ತಮ ಭವಿಷ್ಯ ರೂಪಿಸಿಕೊಳ್ಳಲು, ವ್ಯಸನಗಳಿಂದ ದೂರವಿರಿ:ಡಾ.ನವೀನ್ ಕುಮಾರ್
-
ಬೆಂಗಳೂರು ಗ್ರಾಮಾಂತರ10 months agoಪ್ರತಿಯೊಬ್ಬರೂ ವ್ಯಕ್ತಿತ್ವ, ಸಾಮಾಜಿಕ ಪ್ರಜ್ಞೆಯನ್ನು ಮೈಗೂಡಿಸಿಕೊಳ್ಳಬೇಕು.
